ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ ಮತ್ತೊಬ್ಬರಿಂದ 10.70 ಲಕ್ಷ ರೂ. ಪಡೆದು ವಂಚಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಬೋಗಾದಿಯ 60 ವರ್ಷದ ವ್ಯಕ್ತಿಯೊಬ್ಬರಿಗೆ ಮೇ 23 ರಂದು ಫೇಸ್‌ಬುಕ್ ಮೂಲಕ ಅಪರಿಚಿತನೊಬ್ಬ ಪರಿಚಯವಾಗಿದ್ದಾನೆ. ಆತ ತನ್ನ ಹೆಸರು ಫಿಲೋ ವಿಕ್ಟರ್, ತಾನು ಯುನೈಟೆಡ್ ಕಿಂಗ್ಡಮ್(ಯುಕೆ)ನಲ್ಲಿ ನೆಲೆಸಿರುವುದಾಗಿ ಹೇಳಿಕೊಂಡಿದ್ದಾನೆ.
ಬಳಿಕ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ, ನಂಬಿಕೆ ಗಿಟ್ಟಿಸಿದ್ದಾನೆ. ಮೇ 28 ರಂದು ಕರೆ ಮಾಡಿದ ಆತ. ನಾನು ಹೊಸದಿಲ್ಲಿಗೆ ಬಂದಿದ್ದು, ಇಮಿಗ್ರೇಷನ್ ಫಾರ್ಮಾಲಿಟೀಸ್ ಪೂಣ ಪೂರ್ಣಗೊಳಿಸಲು ತುರ್ತು ಹಣ ಬೇಕು. ನಂತರ ವಾಪಸ್ ಮಾಡುವುದಾಗಿ ಕೇಳಿದ್ದಾನೆ.
ಆತನ ಮಾತು ನಂಬಿ, ಎರಡು ಖಾತೆಗೆ 10,85,900 ರೂ. ವರ್ಗಾಯಿಸಿದ್ದಾರೆ. ಕೆಲ ದಿನಗಳ ನಂತರ ತಾವು ಮೋಸ ಹೋಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಾಯ್ಡು ನಗರದ 42 ವರ್ಷದ ವ್ಯಕ್ತಿಗೆ ಏ.10 ರಂದು ಫೇಸ್‌ಬುಕ್ ಮೂಲಕ ಪರಿಚಯವಾದ ಅಪರಿಚಿತ, ಕೆಲ ದಿನಗಳ ನಂತರ ವಾಟ್ಸಾಪ್ ಸಂದೇಶ ಕಳುಹಿಸಲು ಪ್ರಾರಂಭಿಸಿದ್ದ.
ಹೀಗೆ ಆತ್ಮೀಯತೆ ಬೆಳೆಸಿಕೊಂಡು ಹಣದ ಸಹಾಯ ಮಾಡುವುದಾಗಿ ನಂಬಿಸಿದ್ದ. ಕೆಲ ದಿನಗಳ ಬಳಿಕ ನಾನು 15 ಸಾವಿರ ಹಣವನ್ನು ಗಿಫ್ಟ್ ಆಗಿ ಕಳುಹಿಸಿದ್ದೇನೆ. ಆದರೆ ಆ ಹಣವನ್ನು ಪಡೆಯಬೇಕಾದರೆ ಕೆಲವು ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿ ಹಂತ ಹಂತವಾಗಿ ಒಟ್ಟು 11.70.250 ರೂ. ವರ್ಗಾವಣೆ ಮಾಡಿಸಿಕೊಂಡು, ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…