ಮೈಸೂರು

ಹನಗೋಡು : ಸಾಲವನ್ನು ತೀರಿಸಲಾಗದೆ ಮನನೊಂದು ರೈತ ಆತ್ಮಹತ್ಯೆ

 ಹುಣಸೂರು  : ಹನಗೋಡು ಸಮೀಪದ  ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ.

ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು ಶುಂಠಿ ಬೆಳೆಯನ್ನು ಬೆಳೆದಿದ್ದರು. ಈ ಬೇಸಾಯಕ್ಕೆಂದು ಮೃತನ ತಂದೆ ಬಸವೇಗೌಡ ಹೆಸರಿನಲ್ಲಿ  ಕಟ್ಟೆಮಳಲವಾಡಿ ಐಓಬಿ ಬ್ಯಾಂಕ್ ನಲ್ಲಿ 5ಲಕ್ಷ ಸಾಲ ಮಾಡಿದ್ದರು. ಬೆಳೆಯಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಮತ್ತು  ಅವರ ಅನಾರೋಗ್ಯ ನಿಮಿತ್ತ ಅವರಿಗೆ ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು ಮಾಡಿದ ಸಾಲವನ್ನು ತೀರಿಸಲಾಗದೆ  ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಹೋದರ ಶಿವು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಮೃತರು ಪತ್ನಿ ಸಂಗೀತಾ ಹಾಗೂ ಏಳು ವರ್ಷದ ಗಂಡು ಮಗು ಐದು ವರ್ಷದ ಹೆಣ್ಣು ಮಗು ಇದ್ದಾರೆ ಮೃತರ ಮನೆಗೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ ಡಿ ಹರೀಶ್ ಗೌಡ ಭೇಟಿ ನೀಡಿ ಸಾಂತ್ವನ ಹೇಳಿದರು

andolana

Recent Posts

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

3 mins ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

15 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

11 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

11 hours ago