ಮೈಸೂರು

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು. ತಂಬಾಕು ನಾಟಿ ಮಾಡಿದ್ದು, ಆ ತಂಬಾಕು ಸಸಿಗಳಿಗೆ ರೋಗ ಹರಡಿದ ಹಿನ್ನೆಲೆಯಲ್ಲಿ ನಷ್ಟವಾಗಿ ಮನನೊಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.

ಇವರು 20 ಲಕ್ಷ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಕಿತ್ತೂರಿನ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 5 ಲಕ್ಷ ರೂ. ಹಾಗೂ ಟ್ರಾಕ್ಟರ್ ಮೇಲೆ 5 ಲಕ್ಷ ರೂ. ಹಾಗೂ ಇನ್ನಿತರ ಕಡೆ ಕೈ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

ಆಂದೋಲನ ಡೆಸ್ಕ್

Recent Posts

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

18 mins ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

5 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

5 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

5 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

5 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

5 hours ago