Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಗ್ರಾಮಸ್ಥರು ಕೆ.ಆರ್.ನಗರದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಆನಂದ್  ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಅಂತ್ಯ ಸಂಸ್ಕಾರವು ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ನಡೆಯಿತು. ಮೃತ ಆನಂದ್‌ ಅವರ ಪುತ್ರ ಚಂದ್ರಕಾಂತ್ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!