ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಗ್ರಾಮದ ಎಸ್.ಟಿ.ಆನಂದ್ (೬೦) ಮೃತಪಟ್ಟ ರೈತ. ಇವರು ಜಮೀನಿನಲ್ಲಿ ತಂಬಾಕು ಬೆಳೆಗೆ ನೀರು ಹಾಯಿಸುತ್ತಿದ್ದಾಗ ಗುಡುಗು ಸಿಡಿಲು ಸಹಿತ ಮಳೆ ಬಂದಾಗ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಗ್ರಾಮಸ್ಥರು ಕೆ.ಆರ್.ನಗರದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಆನಂದ್ ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಅಂತ್ಯ ಸಂಸ್ಕಾರವು ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ನಡೆಯಿತು. ಮೃತ ಆನಂದ್ ಅವರ ಪುತ್ರ ಚಂದ್ರಕಾಂತ್ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…