ಮೈಸೂರು

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ: ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ.

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು 2024ರ ಆಗಸ್ಟ್‌ 29ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಸಹ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು 2024ಸೆಪ್ಟಂಬರ್‌ 4 ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಹೀಗಾಗಿ ಅಂದಿನ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು. ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹೀಗಾಗಿ, ರೈತರು ನ್ಯಾಯ ಸಿಗುವವರೆಗೂ ರೈತನಾಯಕರ ನೇತೃತ್ವದಲ್ಲಿ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ, ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

39 mins ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮಂಡ್ಯ: ಇಂದಿನಿಂದ ( ಡಿಸೆಂಬರ್‌ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

2 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

10 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

11 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

11 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

11 hours ago