Farmers protest against irregularities in the dairy sector
ಮಲ್ಕುಂಡಿ : ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವ ಹಸಿರು ಸೇನೆಯ ರೈತ ಸಂಘದ ಮುಖಂಡರು ಡೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮದ ಮುಖಂಡ ಕೆ.ಟಿ.ನಟರಾಜ್ ಮಾತನಾಡಿ, ಡೇರಿ ಆಡಳಿತ ಮಂಡಳಿಯು ಹಾಲು ಉತ್ಪಾದಕರಿಗೆ ಯಾವುದೇ ಬೋನಸ್ ನೀಡದೆ ಸುಮಾರು 2 ಕೋಟಿ ರೂ. ಲೂಟಿ ಮಾಡಿದೆ. 20 ವರ್ಷಗಳಿಂದ ಯಾವುದೇ ಲೆಕ್ಕ ಪತ್ರಗಳನ್ನು ನೀಡದೆ ಹಾಲು ಉತ್ಪಾದಕರಿಗೆ ವಂಚನೆ ಮಾಡಿದೆ. ಈ ಬಗ್ಗೆ ತನಿಖೆ ನಡೆಸಲು ಒಕ್ಕೂಟಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಈಗಲಾದರೂ ಒಕ್ಕೂಟದ ಅಧಿಕಾರಿಗಳು ಇತ್ತ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಾಮೂಹಿಕ ನಾಯಕತ್ವದ ಹಸಿರು ಸೇನೆಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ಮಾತನಾಡಿ, ಗ್ರಾಮದಲ್ಲಿ ರೈತರು ಕಷ್ಟ ಪಟ್ಟು ಹಸುಗಳನ್ನು ಸಾಕಿ ಡೇರಿಗೆ ಹಾಲು ಹಾಕುತ್ತಿದ್ದು, ಅವರ ಹಣ ಲೂಟಿ ಮಾಡುವುದು ಸರಿಯಲ್ಲ. ಆಡಳಿತ ಮಂಡಳಿಯನ್ನು ತಕ್ಷಣ ವಜಾಗೊಳಿಸಿ, ಸೂಕ್ತ ಕ್ರಮ ಕೈ ಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಸವರಾಜ್, ಶಿವಪ್ಪ, ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ರಾಜಪ್ಪ, ಬಸವರಾಜಪ್ಪ, ಚನ್ನಪ್ಪಾಜಿನಾಯಕ, ಶಿವಕುಮಾರ್,ಬಸವರಾಜ್, ಗಿರೀಶ್, ಮಹೇಶ್, ಹರೀಶ್, ಕುಮಾರ್, ಚಾಮರಾಜು, ನಂಜುಂಡ, ನಾಗರಾಜು, ಹಲವಾರು ರೈತರು ಹಾಜರಿದ್ದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…