ಮೈಸೂರು

ರೈತರು ವೈಜ್ಞಾನಿಕ ಬೇಸಾಯ ಪದ್ದತಿ ಅಳವಡಿಸಿಕೊಳ್ಳಿ: ಯೋಗೇಶ್

ಮೈಸೂರು: ರೈತರು ವೈಜ್ಞಾನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಪಡೆದು ಲಾಭ ಪಡೆಯಬಹುದಾಗಿದೆ  ಎಂದು ಉಪ ಕೃಷಿ ನಿರ್ದೇಶಕ ಡಾ.ಜಿ.ಹೆಚ್.ಯೋಗೇಶ್ ತಿಳಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆಗೆ ಇರುವ ಅವಕಾಶ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ದತಿಗಳನ್ನು ಅಳವಡಿಸ ಬೇಕು ಎಂದು ಹೇಳಿದರು.

ಎಣ್ಣೆಕಾಳು ಬೆಳೆಗಳಲ್ಲಿಯೂ ಸಹ ವೈಜ್ಞಾನಿಕ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಬಹುದು ಎಂದರು.

ಸುತ್ತೂರು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಡಾ.ಶ್ಯಾಮರಾಜ್ ಅವರು ವಿವಿಧ ಎಣ್ಣೆಕಾಳು ಬೆಳೆಗಳ ಸುಧಾರಿತ ತಳಿಗಳು ಮತ್ತು ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ಅವರು, ಮಣ್ಣು ಮಾದರಿಗಳ ಸಂಗ್ರಹಣೆ ಮತ್ತು ಫಲಿತಾಂಶ ಆಧಾರಿತ ರಸಗೊಬ್ಬರಗಳ ಬಳಕೆ ಬಗ್ಗೆ ವಿವರಿಸಿದರು.

ರೋಗತಜ್ಞೆ ಡಾ.ಆರ್.ಎನ್. ಪುಷ್ಪ ಅವರು ಬೀಜೋಪಚಾರ, ಸಮಗ್ರ ರೋಗ-ಕೀಟ ನಿರ್ವಹಣೆ ಮತ್ತು ದಾಸ್ತಾನು ಕೀಟಗಳ ನಿರ್ವಹಣೆ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು. ತೆಂಗಿನ ಹಾಲಿನಿಂದ ಐಸ್‌ಕ್ರೀಮ್ ತಯಾರಿಕೆ ಮತ್ತು ಮೌಲ್ಯವರ್ಧನೆ ಕುರಿತು ಪ್ರಗತಿಪರ ರೈತರಾದ ಸುರೇಶ್ ಭಟ್, ಕೂರ್ಗಳ್ಳಿ, ಅನುಭವ ಹಂಚಿಕೊoಡರು.

ಎಣ್ಣೆಕಾಳು ಬೆಳೆಗಳಲ್ಲಿ ಮೌಲ್ಯವರ್ಧನೆ ಮತ್ತು ಕಲಬೆರೆಕೆ ಎಣ್ಣೆ ಕಂಡುಹಿಡಿಯುವ ವಿಧಾನಗಳ ಕುರಿತು ಮೈಸೂರು ಸಿ.ಎಫ್.ಟಿ.ಆರ್.ಐ. ಹಿರಿಯ ವಿಜ್ಣಾನಿಗಳಾದ ಡಾ.ಗೋವಿಂದರಾಜು ಕೆ. ರವರು ಪ್ರಾತ್ಯಕ್ಷತೆ ಮೂಲಕ ರೈತರಿಗೆ ತೋರಿಸಿಕೊಟ್ಟರು.

ಗಾಣದ ಮೂಲಕ ಎಣ್ಣೆ ತೆಗೆದು ಆರೋಗ್ಯ ಯುಕ್ತ ಅಡುಗೆ ಎಣ್ಣೆ ಉತ್ಪಾದನೆ ಮತ್ತು ಮಾರುಕಟ್ಟೆಗಿರುವ ಅವಕಾಶಗಳ ಕುರಿತು ಉದಯೋನ್ಮೂಖ ಉದ್ಯಮಿ ಗಿರೀಶ್ ಅನುಭವ ಹಂಚಿಕೊoಡರು.

ತರಬೇತಿ ಸಂಯೋಜಕ ಹಾಗೂ ಕೃಷಿ ಅಧಿಕಾರಿ ಶಿಲ್ಪ ಜಿ.ಕೆ. ಅವರು 2024 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಸರ್ಕಾರದಿಂದ ಅಧಿಸೂಚಿಸಿರುವ ಬೆಳೆಗಳು, ವಿಮಾಕಂತು ಮತ್ತು ಅಂತಿಮ ದಿನಾಂಕದ ವಿವರಗಳನ್ನು ತಿಳಿಸಿ, ಬೆಳೆ ಸಮೀಕ್ಷೆ ಆಪ್ ಮೂಲಕ ಬೆಳೆ ಸರ್ವೆಯನ್ನು ನಿಮ್ಮ ಗ್ರಾಮದಲ್ಲಿ ಖಾಸಗಿ ನಿವಾಸಿಗಳು ಕೈಗೊಳ್ಳುತ್ತಿದ್ದು ಇದರ ಮಹತ್ವ ಮತ್ತು ಗಮನ ವಹಿಸಲು ತಿಳಿಸಿದರು.

ತರಬೇತಿ ಮುಕ್ತಾಯದ ನಂತರ 25 ಅಂಕಗಳಿಗೆ ಪರೀಕ್ಷೆ ನೆಡೆಸಲಾಗಿ ತರಬೇತಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಹೆಚ್ಚಿನ ಅಂಕ ಪಡೆದ ರೈತರಾದ ಪ್ರಶಾಂತ್ ಕುಮಾರ್, ಸತ್ಯನಾರಾಯಣ ರವರಿಗೆ ಪುಸ್ತಕಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರುಗಳಾದ ಮಮತಾ ಎಸ್.ಬಿ., ಮಧುಲತಾ ಹೆಚ್.ಬಿ. ಮತ್ತು ವಜ್ರೇಶ್ವರಿ ಎಸ್ ಹಾಗೂ ಕೃಷಿ ಅಧಿಕಾರಿ ಶಿಲ್ಪ ಜಿ.ಕೆ. ರಾಜಶೇಖರ ಹೆಚ್. ಆರ್., ಮತ್ತು ಮಂಜುಳ ಎಂ.ಬಿ. ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago