ಮೈಸೂರು : 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಬೇಕಾಗುವ ಕೃಷಿ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ದಾಸ್ತಾನುಗಳ ಲಭ್ಯತೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸೂಚಿಸಿದರು.
ಅವರು ಶನಿವಾರ(ಜೂ.1) ಜಿಲ್ಲಾಧಿಕಾರಿ ಕಚೇರಿ ಸಭಾಗಂಣದಲ್ಲಿ ಕೃಷಿ ಪರಿಕರ ಸರಬರಾಜುದಾರರು ಹಾಗೂ ವಿತರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತರು ಇಚ್ಛಿಸುವ ರಸಗೊಬ್ಬರದ ಜೊತೆ ಲಿಂಕ್ ಮಾಡಿ ಮತ್ತೊಂದು ಗೊಬ್ಬರವನ್ನು ಮಾರಾಟಗಾರರು ವಿತರಿಸಬಾರದು ಹಾಗೂ ರಸಗೊಬ್ಬರಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದಲ್ಲಿ ರಸಗೊಬ್ಬರ ನಿಯಂತ್ರಣ ಕಾಯಿದೆಯ ಆದೇಶದಂತೆ ಕ್ರಮಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಲ್ಲಿಯೂ ಬಿತ್ತನೆ ಬೀಜಗಳು, ರಸಗೊಬ್ಬರಗಳು ಹಾಗೂ ಕೀಟನಾಶಕಗಳ ಕೊರತೆ ಉಂಟಾಗದoತೆ ಸಮರ್ಪಕ ದಾಸ್ತಾನು ಇಟ್ಟುಕೊಳ್ಳತಕ್ಕದ್ದು. ಪ್ರಸ್ತುತ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆ ಬೀಳುವ ಸಂಭವವಿರುವುದರಿoದ ಯಾವುದೇ ಪರಿಕರಗಳ ಲಭ್ಯತೆಯಲ್ಲಿ ವ್ಯತ್ಯಾಸವಾಗದಂತೆ ಅಧಿಕೃತ ಬಿಲ್ಲನ್ನು ರೈತರಿಗೆ ನೀಡುವಂತೆ ಕ್ರಮವಹಿಸಲು ಸೂಚಿಸಿದರು. ರಸಗೊಬ್ಬರ ಸಾಗಾಣಿಕೆ ವೆಚ್ಚಕ್ಕೆ ಸಂಬoಧಿಸಿದoತೆ ಜಿಲ್ಲೆಯಲ್ಲಿ ಹೆಚ್ಚಿನ ದರವನ್ನು ಸಾಗಾಣಿಕೆದಾರರು ನಿಗದಿಪಡಿಸಲಾಗುತ್ತಿದ್ದು ಈ ಬಗ್ಗೆ ಡೀಸೆಲ್ ಹಾಗೂ ಇತರೆ ವೆಚ್ಚಗಳ ಏರಿಕೆಯಾಗದಿರುವುದರಿಂದ ಸಂಬoಧಿಸಿದ ಲಾರಿ ಮಾಲೀಕರ ಸಂಘ ಹಾಗೂ ಲಾರಿ ಅಸೋಸಿಯೇಷನ್ ಪದಾಧಿಕಾರಿಗಳೊಡನೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಜಂಟಿ ಕೃಷಿ ನಿರ್ದೇಶಕರು ಸಭೆ ನಡೆಸಿ ರೈತರಿಗೆ ಯಾವುದೇ ರೀತಿಯ ರಸಗೊಬ್ಬರ ಸರಬರಾಜಿನಲ್ಲಿ ತೊಂದರೆಯಾಗದoತೆ ಕ್ರಮ ಕೈಗೊಳ್ಳಲು ಸೂಚಿಸಿದರು.
2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ನೊಂದಾಯಿಸಿಕೊಳ್ಳಲು ಕ್ರಮವಹಿಸುವಂತೆ ಕೃಷಿ ಪರಿಕರ ಮಾರಾಟಗಾರರ ಸಂಘದವರು ಸಹಕರಿಸಬೇಕು ಹಾಗೂ ಕೃಷಿ ಪರಿಕರ ಮಾರಾಟ ಮಳಿಗೆಯಲ್ಲಿ ಬೆಳೆ ವಿಮೆಗೆ ಸಂಬoಧಿಸಿದ ಪೋಸ್ಟರ್ ಪ್ರದರ್ಶಿಸಬೇಕು ಎಂದು ಅವರು ತಿಳಿಸಿದರು
ರೈತರ ಪ್ರಸ್ತುತ ಸಮಸ್ಯೆಗಳ ಕುರಿತು ಕೃಷಿ ಪರಿಕರ ಮಾರಾಟಗಾರರ ಸಂಘದವರ ಮೂಲಕ ರೈತರಿಗೆ ತರಬೇತಿಯನ್ನು ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ ಬೆಳೆ ವಿಮೆ ಯೋಜನೆಯ ಕರಪತ್ರ ಹಾಗೂ ಪೋಸ್ಟರ್ ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್, ವಿವಿಧ ಕಂಪನಿಯ ರಸಗೊಬ್ಬರ ವಿತರಕರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟಗಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯಬೀಜ ನಿಗಮ ನಿ., ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾ ಮಂಡಳಿಯ ಅಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿದ್ದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…