ಮೈಸೂರು

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಕೇರಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರಗೆ ಸಣ್ಣಪುಟ್ಟ ಗಾಯಗಾಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

5 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

5 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

6 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

6 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

6 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

6 hours ago