ಪಿರಿಯಾಪಟ್ಟಣ: ಕೆಲಸದ ಬಿಲ್ ಪಾವತಿ ಮಾಡುವ ವಿಚಾರವಾಗಿ ವ್ಯಕ್ತಿಯೊರ್ವನಿಂದ ಲಂಚ ಪಡೆಯುತ್ತಿದ್ದ ಎಫ್‌ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಅಧಿಕಾರಿ ವಿಜಯ್ ಶಂಕರ್ ಲೋಕಾಯುಕ್ತ ಬಲೆಗೆ ಬಿದ್ದವರು. ನಟೇಶ್ ಎಂಬ ವ್ಯಕ್ತಿಯ ಬಿಲ್ ಪಾಸ್ ಮಾಡಲು ಆತನಿಂದ ಚೆಕ್‌ವೊಂದನ್ನ ಪಡೆಯಲಾಗಿತ್ತು. ಚೆಕ್ ಹಿಂದುರಿಗಿಸಲು 30 ಸಾವಿರ ರೂ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತ ನಟೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಕಾರ್ಯಚರಣೆಗಿಳಿದ ಲೋಕಯುಕ್ತ ಪೊಲೀಸರು ಗುರುವಾರ(ಮೇ.16) ವಿಜಯ್ ಶಂಕರ್ ತಮ್ಮ ಕಚೇರಿಯ ಬಳಿ ದೂರುದಾರ ನಟೇಶ್‌ರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಲೋಕಾಯುಕ್ತ ಎಸ್ಪಿ ಸಜಿತ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ರವಿಕುಮಾರ್, ರೂಪಶ್ರೀ, ಲೋಕೇಶ್ ಹಾಗೂ ಸಿಬ್ಬಂದಿ ಮೋಹನ್‌ಗೌಡ, ವೀರಭದ್ರಸ್ವಾಮಿ, ಆಶಾ, ತ್ರಿವೇಣಿ, ಪುಷ್ಪಲತಾ, ದಿನೇಶ್,ಲೋಕೇಶ್, ಪೃಥ್ವಿಷ, ಶೇಖರ್ ಇದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…