ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ವ್ಯಕ್ತಿ ಪುಟ್ಟಸ್ವಾಮಿ ಎಂಬಾತ ಗ್ರಾಮದ ಆಡಳಿತ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.
ಮೈಸೂರು ತಾಲ್ಲೂಕಿನ ಗುಡಮಾದನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿ ಭವ್ಯಾ ಹಾಗೂ ಗ್ರಾಮ ಸಹಾಯಕ ನವೀನ್ ಕುಮಾರ್ ಎಂಬುವವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಜಮೀನಿನ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಪುಟ್ಟಸ್ವಾಮಿ ಧಮ್ಕಿ ಹಾಕಿದ್ದಾನೆ.
2025ರ ಡಿಸೆಂಬರ್.31ರಂದು ಪುಟ್ಟಸ್ವಾಮಿ ಬೆದರಿಕೆ ಹಾಕಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಪುಟ್ಟಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.




