ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವನ್ಯಜೀವಿ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಸಮಾರು 13 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ.
ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ಶಾಖೆಯ ಗಣಗೂರು ಗಸ್ತಿನ ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಗಸಿನಲ್ಲಿದ್ದ ವೇಳೆ ಹುಲಿಯ ಶವ ಕಾಣಿಸಿಕೊಂಡಿದೆ.
ಸ್ಥಳದಲ್ಲಿ ಮತ್ತೊಂದು ಹುಲಿಯೊಂದಿಗೆ ಕಾದಾಟ ನಡೆಸಿರುವ ಕುರುಹು ಸಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ, ಸಹಾಯಕ ಅರಣ್ಯ ಸಂಕರಕ್ಷಣಾಕಾರಿ ಡಿ.ಎಸ್.ದಯಾನಂದ್, ವಲಯ ಅರಣ್ಯಾಕಾರಿ ಡಿ.ದೇವರಾಜು ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿದರು.
ಎಲ್ಲರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ಥಳದಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.