ಮೈಸೂರು : ಶ್ರಾವಣ ಮಾಸದ ಎರಡನೇ ಶುಕ್ರವಾರ ಶ್ರೀ ವರಮಹಾಲಕ್ಷಿ ಹಬ್ಬದ ಅಂಗವಾಗಿ ಜಿಲ್ಲಾದ್ಯಂತ ಶ್ರೀ ಲಕ್ಷಿ ಹಾಗೂ ಇತರೆ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಶುಕ್ರವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ನಗರ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರು ವರ ಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿದರು. ಮನೆಯಲ್ಲಿ ಕಳಸ ಪ್ರತಿಷ್ಠಾಪನೆ ಮಾಡಿ, ಅದಕ್ಕೆ ಲಕ್ಷ್ಮೀಯ ಮುಖವಾಡ, ಸೀರೆ, ಬಳೆ ತೊಡಿಸಿ, ಬಗೆ ಬಗೆಯ ಹೂವುಗಳಿಂದ ಅಲಂಕಾರ ಮಾಡಿ, ವಿವಿಧ ತಿನಿಸುಗಳು, ಹಣ್ಣುಗಳನ್ನು ನೈವೇದ್ಯಕ್ಕಿಟ್ಟು ವಿಶೇಷವಾಗಿ ಪ್ರಾರ್ಥಿಸಿದರು.
ವರಮಹಾಲಕ್ಷ್ಮಿ ಹಬ್ಬವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಮಹಿಳೆಯರು ಮನೆಯಲ್ಲಿ ವ್ರತ ಆಚರಣೆ ಮಾಡಿ ಬಳಿಕ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದಿವಾನ್ಸ್ ರಸ್ತೆಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಅಲ್ಲದೆ ದಟ್ಟಗಳ್ಳಿಯ ನೇತಾಜಿ ಸರ್ಕಲ್‌ನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲೂ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಹಬ್ಬದ ಸಂಭ್ರಮ: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವರಮಹಾಲಕ್ಷಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮಾಂತರ ಪ್ರದೇಶಗಳಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಜನತೆ ಮುಂಜಾನೆಯೇ ತಮ್ಮ ಮನೆಗಳನ್ನು ಶೃಂಗರಿಸಿ ಸುಂದರ ಮಂಟಪ ಸಿದ್ಧಪಡಿಸಿ, ಲಕ್ಷಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಆಭರಣಗಳಿಂದ ಸಿಂಗರಿಸಿ, ವಿಶೇಷ ಪೂಜೆ ನಡೆಸಿದರು. ಹಬ್ಬಕ್ಕಾಗಿಯೇ ವಿಶೇಷ ಸಿಹಿ ತಿಂಡಿ-ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂತು.
ಪೂರಿ ಜಗನ್ನಾಥ ರಥಯಾತ್ರೆ ಮಾದರಿ
ನಗರದ ಸಿದ್ಧಾರ್ಥನಗರದ ಪ್ರವೀಣ್ ಹಾಗೂ ಮಾಲಿನಿ ದಂಪತಿ ನಿವಾಸದಲ್ಲಿ ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಯಿತು. ಪೂರಿ ಜಗನ್ನಾಥ ರಥದ ಮಾದರಿ ನಿರ್ಮಿಸಿ, ಅದರೊಳಗೆ ಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ, ವಿಶೇಷವಾಗಿ ವಿವಿಧ ಹೂವುಗಳಿಂದ ಅಲಂಕಾರ ಮಾಡಿ ಲಕ್ಷ್ಮಿ ಪೂಜೆ ಮಾಡಲಾಯಿತು. ಅಶ್ವಾರೂಢ ರಥ ನೋಡುಗರ ಗಮನ ಸೆಳೆಯುವಂತಿತ್ತು.
ತಿನಿಸುಗಳಿಗೆ ಬೇಡಿಕೆ
ಇನ್ನು ಹಬ್ಬದ ಹಿನ್ನೆಲೆಯಲ್ಲಿ ದೇವರ ನೈವೇದ್ಯಕ್ಕೆ ತಿನಿಸುಗಳನ್ನು ಇಡುವುದು ವಾಡಿಕೆ. ಅದರಂತೆ ನಗರದ ವಿವಿಧ ಬೇಕರಿಗಳು, ಚಕ್ಕುಲಿ, ನಿಪ್ಪಟ್ಟು, ಕರ್ಜಿಕಾಯಿ, ರವೆ ಉಂಡೆ ಸೇರಿದಂತೆ ವಿವಿಧ ತಿನಿಸುಗಳನು ಜನರು ಖರೀದಿಸಿದರು.
ಚಾಮುಂಡಿಬೆಟ್ಟದಲ್ಲಿ ಜನಜಾತ್ರೆ
ಇನ್ನು ಯಾವುದೇ ಹಬ್ಬಗಳು ಬಂತೆಂದರೆ ಜನರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ ಅದರಂತೆ ಶುಕ್ರವಾರ ಬೆಳಿಗ್ಗೆಯಿಮದಲೇ ಜಾಮುಂಡಿಬೆಟ್ಟದಲ್ಲಿ ಜನ ಜಾತ್ರೆಯೇ ನೆರೆದಿತ್ತು. ಉಳಿದಂತೆ ನಗರದ ಅರಮನೆ ಆವರಣ, ಕೆಜಿ ಕೊಪ್ಪಲಿನ ಚಾಮುಂಡೇಶ್ವರಿ ದೇವಾಲಯ, ಶ್ರೀರಾಂಪುರದ ಶಿವ ದೇವಾಲಯ, ಕಾಮಕಾಮೇಶ್ವರಿ ದೇವಾಲಯ, ಗಣಪತಿ ಸಚ್ಚಿದಾನಂದಾಶ್ರಮ, ಉತ್ತಮಹಳ್ಳಿ ಮಾರಮ್ಮ ಸೇರಿದಂತೆ ನಗರದ ವಿವಿಧ ಬಡಾವಣೆಗಳ ದೇವಾಲಯಗಳಲ್ಲಿ ವೀಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…