Mysore
21
clear sky

Social Media

ಬುಧವಾರ, 21 ಜನವರಿ 2026
Light
Dark

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

dinesh gundurao

ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ಮಾಡುತ್ತಿದ್ದ ಹಂತಕರನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್‌ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ.

ಇದನ್ನು ಓದಿ: ಮೈಸೂರು| ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಹಂತಕರ ಗ್ಯಾಂಗ್‌ ಅರೆಸ್ಟ್‌

ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಒಂದು ಸಾಮಾಜಿಕ ಪಿಡುಗು. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕದ ವಿರುದ್ಧ ಸಹಕರಿಸುವವರ ಜೊತೆಯಿದೆ. ಯಾರು ಎಷ್ಟೇ ದೊಡ್ಡವರಿದ್ದರೂ, ಹೆಣ್ಣು ಭ್ರೂಣ ಹಂತಕರನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಕಠುಬದ್ಧವಾಗಿದೆ ಎಂದು ಹೇಳಿದರು.

Tags:
error: Content is protected !!