dinesh gundurao
ಬೆಂಗಳೂರು: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭ್ರೂಣ ಹತ್ಯೆ ಮಾಡುತ್ತಿದ್ದ ಹಂತಕರನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ.
ಇದನ್ನು ಓದಿ: ಮೈಸೂರು| ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಹಂತಕರ ಗ್ಯಾಂಗ್ ಅರೆಸ್ಟ್
ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಒಂದು ಸಾಮಾಜಿಕ ಪಿಡುಗು. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕದ ವಿರುದ್ಧ ಸಹಕರಿಸುವವರ ಜೊತೆಯಿದೆ. ಯಾರು ಎಷ್ಟೇ ದೊಡ್ಡವರಿದ್ದರೂ, ಹೆಣ್ಣು ಭ್ರೂಣ ಹಂತಕರನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಕಠುಬದ್ಧವಾಗಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…