ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ.
2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದ್ದು, ಕೇರಳದಲ್ಲಿ ಫುಟ್ಬಾಲ್ ಕ್ರೇಜ್ ಈ ಬಾರಿಯೂ ಉತ್ತುಂಗಕ್ಕೇರಿದೆ. ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಮಧ್ಯರಾತ್ರಿಯ ಫೈನಲ್ ಪಂದ್ಯವನ್ನು ವಿದ್ಯಾರ್ಥಿಗಳು ನೆಮ್ಮದಿಯಿಂದ ವೀಕ್ಷಿಸಲು ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಕಾಲಮಾನ ರಾತ್ರಿ 12:30ಕ್ಕೆ ಪಂದ್ಯ ಆರಂಭವಾಗಲಿದ್ದು, ರಾತ್ರಿ ತಡವಾಗಿ ಪಂದ್ಯ ವೀಕ್ಷಿಸಿದ ಬಳಿಕ ಬೆಳಗ್ಗೆ ಶಾಲೆಗೆ ಹಾಜರಾಗುವುದು ಕಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಜೆ ಘೋಷಿಸಿದೆ.





