Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಭರ್ತಿಯಾದ ಕಬಿನಿ: ಪ್ರವಾಹ ಮುನ್ನೆಚ್ಚರಿಕೆ

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 5,000. ಕ್ಯೂಸೆಕ್ಸ್ ಗೂ ಹೆಚ್ಚಿದೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆ ಕಬಿನಿ ಜಲಾಶಯದಿಂದ 5,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.

ಯಾವುದೇ ಕ್ಷಣದಲ್ಲಾದರೂ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದ್ದು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ ಎಂದು ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!