Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಕೊನೆಗೂ 6 ರಂಗಾಯಣಕ್ಕೆ ನಿರ್ದೇಶಕರ ನೇಮಕ; ಮೈಸೂರು ರಂಗಾಯಣಕ್ಕೆ ಯಾರು..?

ಬೆಂಗಳೂರು: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.

ಅವರು ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು

ನಿರ್ದೇಶಕರ ಪಟ್ಟಿ ಇಂತಿದೆ..

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು.
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ .
ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ.
ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ.
ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ

 

Tags:
error: Content is protected !!