ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮೇಲೆ ಆಗಿರುವ ಎಫ್‌ಐಆರ್ ಖಂಡನೀಯ. ಬಾಯತಪ್ಪಿ ಹೇಳಿರುವ ಮಾತಿಗೆ ಕ್ಷಮೆ ಕೋರಿದ್ದಾರೆ. ಇಳಿ ವಯಸ್ಸಿನಲ್ಲಿ ಅವರಿಗೆ ತೊಂದರೆ ಕೊಡಬಾರದು. ಕೂಡಲೇ ಅವರ ವಿರುದ್ಧದ ಪ್ರಕರಣವನ್ನು ವಾಪಸ್ಸು ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಮುಡಾ ಹಿಂದಿನ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ದೂರು ದಾಖಲಿಸಿ
ಮುಡಾ ಆಸ್ತಿಗೆ ಅಧ್ಯಕ್ಷರು ಹಾಗೂ ಆಯುಕ್ತರೇ ಮಾಲೀಕರು. ಅಕ್ರಮ ಪ್ರಕರಣಗಳು ದಾಖಲಾದರೂ ದೂರು ಕೊಟ್ಟಿಲ್ಲವೇಕೆ? ಇಷ್ಟಾದ ಮೇಲೂ ಜಿಲ್ಲಾಧಿಕಾರಿಗಳು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಸರಿಯಲ್ಲ. ಹಿಂದಿನ ಅಧ್ಯಕ್ಷರು ಹಾಗೂ ಆಯುಕ್ತರ ಮೇಲೆ ತಕ್ಷಣ ದೂರು ದಾಖಾಲಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಮುಡಾದ ಬಗ್ಗೆ ಗಂಭೀರ ಕ್ರಮ ಕೈಗೊಳ್ಳದಿದ್ದರೆ, ನಿವೇಶನ ಪಡೆದವರು ಪ್ರಾಣ ಕಳೆದುಕೊಳ್ಳುವ ಅಪಾಯ ಎದುರಾಗಬಹುದು. ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಆಗ್ರಹಿಸಿದ ಅವರು ಮುಡಾನೇ ಅಕ್ರಮದ ಬಗ್ಗೆ ದೂರು ಕೊಟ್ಟಿಲ್ಲ ಎಂದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಮುಡಾದಿಂದ 140 ಫೈಲ್‌ಗಳನ್ನು ಐಎಎಸ್ ಅಧಿಕಾರಿ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದಾರೆ ಎಂದು ಲೋಕಾಯುಕ್ತ ಟಿಪ್ಪಣಿಯಲ್ಲಿ ಹೇಳಿದ್ದಾರೆ. ಅವು ಯಾರಿಗೆ ಸಂಬಂಧ ಪಟ್ಟವು ಎಂಬುದನ್ನು ಸರ್ಕಾರ ತಿಳಿಸಬೇಕು ಎಂದು ಒತ್ತಾಯಿಸಿದರು.
ಹಾಸನದಲ್ಲಿ ನಿಯೋಜನೆಗೊಂಡಿರುವ ಸಮಾವೇಶ ಯಾರಿಗೋಸ್ಕರ? ಸಿದ್ದರಾಮಯ್ಯ ಅವರಿಗೆ ಸಂಕಟ ಬಂದಾಗಲೆಲ್ಲಾ ಈ ತರಹದ ಸಮಾವೇಶ ಏರ್ಪಡಿಸುತ್ತಾರೆ. ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…