ಮೈಸೂರು: ಎಟಿಎಂಗೆ ಹಣ ತುಂಬದೇ ತಾವೇ ತೆಗೆದುಕೊಂಡು ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಷಯ್ ಕುಮಾರ್ ಎಂಬುವವನು ಟಿಎಲ್ ಎಂಟರ್‌ಪ್ರೈಸಸ್‌ನಲ್ಲಿ ಕೆಲಸ ಮಾಡುತ್ತಿದ್ದ.
ಟಿಎಲ್ ಎಂಟರ್‌ಪ್ರೈಸಸ್, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ ತುಂಬುತ್ತಿದ್ದ ಎನ್ನಲಾಗಿದೆ. ಇನ್ನು ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಆದರೆ ಈಗ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ.
ಅನುಮಾನಗೊಂಡು ಎಟಿಎಂ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಅಕ್ಷಯ್ ಎಟಿಎಂಗೆ ಹಣ ಹಾಕದೇ ಬ್ಯಾಗ್‌ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್ ಮಾಡಿಲ್ಲ ಎಂದು ಗೊತ್ತಾಗಿದೆ.
ಅಕ್ಷಯ್ ಕುಮಾರ್‌ಗೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿಬಂದಿದ್ದು, ಇಬ್ಬರ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ.
ಈ ಹಣದಿಂದ ಇಬ್ಬರು ಚಿನ್ನ ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಚಿನ್ನದ ಅಂಗಡಿಯಲ್ಲಿ ಇಬ್ಬರು ಚಿನ್ನ ಖರೀದಿ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…