ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಗುಜರಿ ಸಮೀಪವೇ ಇದ್ದ ವಾಸದ ಮನೆಗಳಿಗೆ ಯಾವುದೇ ಅನಾಹುತ ಸಂಭವಿಸದಂತೆ ಜಾಗ್ರತೆ ವಹಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸಾರ್ವಜನಿಕರು ಜನವಸತಿ ಪ್ರದೇಶದಲ್ಲಿ ಗುಜರಿಗೆ ಅನುಮತಿ ಕೊಡುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.





