ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್ ಪದಾರ್ಥಗಳ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ದುರಂತ ಸಂಭವಿಸಿದೆ.
ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ ಗ್ರಾಮದ ಗ್ಯಾಸ್ ಗೋಡೌನ್ ಬಳಿ ಇರುವ ಪದಾರ್ಥಗಳನ್ನು ತಂದು ಸಂಗ್ರಹಿಸಿಟ್ಟಿದ್ದು, ಇದ್ದಕ್ಕಿದ್ದಂತೆ ಕೆಮಿಕಲ್ ಮಿಶ್ರಿತ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಬೆಂಕಿಯ ಕಾವು ಹೆಚ್ಚಾಗುತ್ತಿದ್ದಂತೆ ಕೆಮಿಕಲ್ ಮಿಶ್ರಿತ ಹಳೆ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಈ ವೇಳೆ ಆತಂಕಗೊಂಡ ಗ್ರಾಮಸ್ಥರು ಬ್ಲಾಸ್ಟ್ ಆದ ಶಬ್ದಕ್ಕೆ ಹೆದರಿ ಕತ್ವಾಡಿಪುರ ಗ್ರಾಮಸ್ಥರು ಮನೆಯಿಂದ ಹೊರ ಬಂದಿದ್ದರು.
ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.