ಮೈಸೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಟಿಂಬರ್ ಮಳಿಗೆಯಲ್ಲಿನ ಲಕ್ಷಾಂತರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಆಂದೋಲನ ವೃತ್ತ ಬಳಿಯಿರುವ ಯೂಸ್ರಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುವೆಂಪುನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.