ಮೈಸೂರು: ನಗರದ ಹಾರ್ಡಿಂಗ್ ವೃತ್ತದ ಬಳಿ ಅರಮನೆ ಗೋಡೆಗೆ ಹೊಂದಿಕೊಂಡಂತಿರುವ ಖಾಲಿ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ನರ್ಸರಿ ಆವರಣದಲ್ಲಿ ಬೆಳೆದಿರುವ ಒಣ ಹುಲ್ಲು ಹೊತ್ತಿ ಉರಿದಿದೆ. ತ್ವರಿತ ಗತಿಯಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಸಿಲಿನ ಝಳಕ್ಕೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಅಥವಾ ನಷ್ಟ ಉಂಟಾಗಿಲ್ಲ ಎಂದು ವರದಿಯಾಗಿದೆ.





