ಎಚ್.ಡಿ.ಕೋಟೆ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ಪಟ್ಟಣದ ಲೋಕೇಶ್ ಎಂಬುವವರಿಗೆ ಸೇರಿದ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಸ್ಟೇಷನರಿ, ಜೆರಾಕ್ಸ್ ಯಂತ್ರ, ಪ್ರಿಂಟರ್ ಸೇರಿದಂತೆ ಸುಮಾರು 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





