ಮೈಸೂರು

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ.

ನಗರದ ರಿಂಗ್​ ರಸ್ತೆಯಲ್ಲಿರುವ ಫಾಕ್ಸ್​ ಡೆನ್​​​ ಪಬ್​​ನಲ್ಲಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಸಾಹಿಲ್​ ಮತ್ತು ಪ್ರಕಾಶ್​ ಎಂದು ಗುರುತಿಸಲಾಗಿದೆ.  ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

 

ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಜನ

ಪಬ್‌ನ ಅಡುಗೆ ಕೋಣೆಯಲ್ಲಿ ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಸ್ಫೋಟದ ಭೀಕರತೆಗೆ ಪಬ್‌ನ ಒಳಗಡೆ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಇಡೀ ಕಟ್ಟಡವನ್ನು ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿತ್ತು. ಏಕಾಏಕಿ ಸಂಭವಿಸಿದ ಈ ಘಟನೆಯಿಂದ ಪಬ್‌ನಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂದಿ ದಿಕ್ಕುತೋಚದೆ ಕಂಗಾಲಾಗಿದ್ದಾರೆ. ಕಟ್ಟಡದ ಒಳಗೆ ಹೊಗೆ ತುಂಬಿಕೊಂಡು ಉಸಿರಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾದಾಗ, ಒಳಗಿದ್ದ ಕೆಲವರು ತಮ್ಮ ಪ್ರಾಣ ಉಳಿಸಿಕೊಳ್ಳಲು ಪಬ್‌ನ ಮೇಲಂತಸ್ತಿನಿಂದ ಕೆಳಗೆ ಜಿಗಿದು ಪಾರಾಗಲು ಯತ್ನಿಸಿದ್ದಾರೆ. ಈ ವೇಳೆ ಕೆಲವರಿಗೆ ಮೂಳೆ ಮುರಿತ ಹಾಗೂ ಗಂಭೀರ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ: ಗಾಯಾಳುಗಳು ಆಸ್ಪತ್ರೆಗೆ ದಾಖಲು
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಲವಾರು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಇಡೀ ಕಟ್ಟಡವನ್ನು ಆವರಿಸಿದ್ದ ಭಾರಿ ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಕಟ್ಟಡದ ಒಳಗಿದ್ದವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago