ಮೈಸೂರು

ವನ್ಯಜೀವಿ ವಲಯದ ಸಿಬ್ಬಂದಿಗಳಿಗೆ ಉನ್ನತ ಅಧಿಕಾರಿಗಳಿಂದ ಬೆಂಕಿ ನಂದಿಸುವ ಬಗ್ಗೆ ತರಬೇತಿ ಶಿಬಿರ!

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಜೆ.ಗಂಗಾನಾಯ್ಕ ತಿಳಿಸಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆಯ ಕಾಕನಕೋಟೆ ಸಫಾರಿ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ನಾಗರಹೊಳೆಯ ಅಂತರಸಂತೆ, ಮೇಟಿಕುಪ್ಪೆ ಮತ್ತು ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳಿಗೆ ಬೆಂಕಿ ನಂದಿಸುವ ಬಗ್ಗೆ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಕಾಡಿಗೆ ಬೆಂಕಿ ಬೀಳದಂತೆ ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಒಮ್ಮೆ ಕಾಡಿಗೆ ಬೆಂಕಿ ಬಿದ್ದರೆ ಅಲ್ಲಿನ ಜೀವ ಪರಿಸರ ಪುನರ್ ನಿರ್ಮಾಣವಾಗಲು ಕನಿಷ್ಠ ೧೫ವರ್ಷಗಳಾದರೂ ಬೇಕಾಗುತ್ತದೆ. ಆದ್ದರಿಂದ ಬೇಸಿಗೆಯ ಈ ೨-೩ ತಿಂಗಳುಗಳು ಕಾಡಿನ ರಕ್ಷಣೆಗೆ ನಾವು ಶ್ರಮಿಸಬೇಕಿದೆ.

ಜನರಲ್ಲಿನ ಅರಿವಿನ ಕೊರತೆಯಿಂದಾಗಿಯೂ ಕೆಲಬಾರಿ ಕಾಡಿಗೆ ಬೆಂಕಿ ಬೀಳುವ ಅಪಾಯವಿರುತ್ತದೆ. ರೈತರು ಜಮೀನುಗಳಲ್ಲಿ ಹಾಕುವ ಬೆಂಕಿ, ಬೀಡಿ ಸಿಗರೇಟಿನ ಬೆಂಕಿ ಕಿಡಿಗಳು ಕಾಡ್ಗಿಚ್ಚು ಆಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ನಾವು ಕಾಡಂಚಿನ ಗ್ರಾಮಗಳಲ್ಲಿ ಜನರಿಗೆ ಕಾಡ್ಗಿಚ್ಚು ಹೇಗೆ ಸಂಭವಿಸುತ್ತದೆ. ಅದರ ಪರಿಣಾಮಗಳೇನು ಎಂಬುದರ ಬಗ್ಗೆ ಅರಿವು ಮೂಡಿಸಬೇಕು.

ಇತ್ತೀಚೆಗೆ ಕಾಡಿನ ಮೂಲಕ ಹಾದು ಹೋಗುವ ಮಾರ್ಗದಲ್ಲಿ ಸಂಚರಿಸುವ ಕೆಲ ವಿದ್ಯಾವಂತರೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಕಾಡಿನ ಮಧ್ಯೆ ವಾಹನ ನಿಲ್ಲಿಸಿ ಸಿಗರೇಟು ಸೇದು ಬೀಸಾಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಕಾಡಿಗೆ ಅಪಾಯವಿದೆ. ಆದ್ದರಿಂದ ಅರಣ್ಯ ಇಲಾಖೆ ಅಂತಹವರಿಗೆ ಕಡಿವಾಣ ಹಾಕಬೇಕು. ಗೇಟ್ ಬಳಿಯೇ ಅವರನ್ನು ತಪಾಸಣೆ ಮಾಡಬೇಕು.

ಇನ್ನು ಬೆಂಕಿ ನಂದಿಸುವ ಸಾಧನ ಸಲಕರಣಗಳನ್ನು ಸಿದ್ಧವಾಗಿಟ್ಟುಕೊಂಡು, ಅಪಾಯ ಕಂಡಬಂದ ಸ್ಥಳಗಳಿಗೆ ಶೀಘ್ರವಾಗಿ ಸಾಗಿಸುವ ವ್ಯವಸ್ಥೆ ಮಾಡಿಕೊಂಡಿರಬೇಕು. ಜತೆಗೆ ಅಕ್ಕಪಕ್ಕದ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಕಾಡ್ಗಿಚ್ಚಿನ ಬಗ್ಗೆ ಜಾಗೃತಿ ಮೂಡಿಸಬೇಕು.

ಕಾಡಿನ ರಕ್ಷಣೆಗಾಗಿ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಳ್ಳೋಣ. ಅಕ್ಕಪಕ್ಕದ ಗ್ರಾಮದಲ್ಲಿರುವ ಮರಗಳ್ಳರು, ಕಾಡಿಗೆ ಅಪಾಯ ತಂದೊಡ್ಡಬಹುದಾದವವರು ಇದ್ದರ ಅವರ ಬಗ್ಗೆ ಹೆಚ್ಚಿನ ನಿಗಾ ಇಡುವುದು ಅತ್ಯಾವಶ್ಯಕ ಎಂದರು.

ಬಳಿಕ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಗ್ನಿ ಶಾಮಕ ಇಲಾಖೆಯ ಸಾಧನೆಗಳನ್ನು ಬಳಸುವುದರ ಬಗ್ಗೆ ತರಬೇತಿ ನೀಡಿದರು.

ಈ ವೇಳೆ  ಎಸಿಎಫ್ ರಂಗಸ್ವಾಮಿ, ಮೈಸೂರು ಪ್ರಾದೇಶಿಕ ವಲಯದ ಎಸಿಎಫ್ ಲಕ್ಷ್ಮೀಕಾಂತ್, ಎಚ್.ಡಿ.ಕೋಟೆ ಎಸಿಎಫ್ ಅಭಿಷೇಕ್, ವಲಯ ಅರಣ್ಯಾಧಿಕಾರಿಗಳಾದ ಭರತ್ ತಳವಾರ್, ಮಧು, ಹನುಮಂತರಾಜು ಸೇರಿದಂತೆ ಅಂತರಸಂತೆ, ಡಿ.ಬಿ.ಕುಪ್ಪೆ, ಮೇಟಿಕುಪ್ಪೆ ವಲಯದ ಡಿಆರ್‌ಎಫ್‌ಒಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಎಲ್ಲ ವಲಯದ ಸಿಬ್ಬಂದಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಎಲ್ಲಿ ಏನೇ ಅಪಾಯದ ಸೂಚನೆ ಸಿಕ್ಕರೂ ಪರಸ್ಪರ ಮಾಹಿತಿ ರವಾನಿಸುವುದು ಎಲ್ಲರ ಕರ್ತವ್ಯ. ಕಾಡಿನ ರಕ್ಷಣೆಯ ಜತೆಗೆ ನಮ್ಮ ರಕ್ಷಣೆಯೂ ಮುಖ್ಯವಾಗಿರುವುದರಿಂದ ಕಾಡಿನಲ್ಲಿ ಗುಂಪಿನಲ್ಲಿರುವುದು ಉತ್ತಮ. ಜತೆಗೆ ಅಗತ್ಯ ಸಲಕರಣಗಳನ್ನು ಬಳಸಿಕೊಂಡು, ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಅಲ್ಲದೆ ನೀರಿನ ಮೂಲಗಳಿಗೆ ವಾಹನಗಳು ಹೋಗಿ ಬರಲು ಇರುವ ರಸ್ತೆಗಳು ಸೂಕ್ತವಾಗಿರುವಂತೆ ನೋಡಿಕೊಳ್ಳಬೇಕು.
-ರಂಗಸ್ವಾಮಿ, ಎಸಿಎಫ್, ಮೇಟಿಕುಪ್ಪೆ ಉಪವಿಭಾಗ

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

9 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago