ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಬೆಂಕಿ ಅನಾಹುತ ತಡೆಯಲು ಫೈರ್‌ಲೈನ್‌ ನಿರ್ಮಾಣ ಕಾರ್ಯ

ಪ್ರಶಾಂತ್‌ ಎಸ್ 

ಮೈಸೂರು: ಈ ಬಾರಿ ಮಳೆಗಾಲ ಉತ್ತಮವಾಗಿದ್ದು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿರುವ ಪರಿಣಾಮ ಇನ್ನೂ ಹಸಿರು ನಳನಳಿಸುತ್ತಿದೆ.

ಅರಣ್ಯದೊಳಗಿನ ಸೋಲಾರ್ ಪಂಪ್‌ನಿಂದಾಗಿ ಕೆರೆ-ಕಟ್ಟೆಗಳಿಗೆ ನಿರಂತರವಾಗಿ ನೀರು ತುಂಬುತ್ತಿರುವುದು ಹಾಗೂ ಉದ್ಯಾನವನದೊಳಗೆ ಹರಿಯುವ ನಾಗರಹೊಳೆ, ಸಾರಥಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಹರಿವು ಇರುವುದರಿಂದ ಅರಣ್ಯ ಬೆಂಕಿ ತಡೆಗೆ ಹಾಗೂ ವನ್ಯಜೀವಿಗಳ ನೀರಿನ ದಾಹ ನೀಗಿಸಲು ಸಜ್ಜಾಗಿದೆ.

ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಫೈರ್‌ಲೈನ್ ಕಾರ್ಯ ಮುಗಿಯುತ್ತಿತ್ತು. ಈ ಬಾರಿ ಜನವರಿ ಅಂತ್ಯದೊಳಗೆ ಬಹುತೇಕ ಮುಗಿಯಬಹುದೆಂದು ನಿರೀಕ್ಷಿಸಲಾಗಿದೆ. ‌

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ವೀರನಹೊಸಹಳ್ಳಿ, ಹುಣಸೂರು, ಮತ್ತಿಗೋಡು, ನಾಗರಹೊಳೆ, ಕಲ್ಲಳ್ಳ, ಅಂತರಸಂತೆ, ಮೇಟಿಕುಪ್ಪೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ೨,೫೩೭ ಕಿ.ಮೀ ನಷ್ಟು ಫೈರ್‌ಲೈನ್ ನಿರ್ಮಿಸಬೇಕಿದ್ದು, ಈಗಾಗಲೇ ಬೆಂಕಿರೇಖೆ ನಿರ್ಮಿಸುವ ಸಲುವಾಗಿ ಗಿಡಗಂಟಿ ತೆರವುಗೊಳಿಸಲಾಗಿದೆ. ಬಹುತೇಕ ಕಡೆಗಳಲ್ಲಿ ಪೈರ್‌ಲೈನ್ ನಿರ್ಮಿಸಲಾಗಿದೆ. ‌

ಪ್ರತಿ ವಲಯದಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ನುರಿತ ಸುಮಾರು ೪೦೦ ಮಂದಿ ಆದಿವಾಸಿಗಳನ್ನು ಪ್ರತಿ ವಲಯಕ್ಕೆ ೪೦-೬೫ ಮಂದಿಯಂತೆ ನೇಮಿಸಿಕೊಳ್ಳಲಾಗಿದೆ. ಇವರಿಗೆ ನಿತ್ಯ ಮಧ್ಯಾಹ್ನ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ಯಾನವನದ ಹಲವೆಡೆ ಇರುವ ದೊಡ್ಡದಾದ ೩೧ ವೀಕ್ಷಣಾ ಗೋಪುರಗಳ ಮೂಲಕ ಹಾಗೂ ಉದ್ಯಾನವನದ ಅಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಹಗಲು-ರಾತ್ರಿ ವೇಳೆ ಛಾಯಾಚಿತ್ರ ತೆಗೆಯುವ ೩ ಡ್ರೋನ್ ಕ್ಯಾಮೆರಾ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳನುಸುಳುವವರ ಪತ್ತೆಗಾಗಿ ಅಲ್ಲಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ.

ಇನ್ನು ಪ್ರತಿ ವಲಯಕ್ಕೆ ಒಂದರಂತೆ ಜೀಪ್ ಮೌಂಟೆಡ್ ಟ್ಯಾಂಕರ್ ಇದೆ. ೮೦ ಸ್ಪ್ರೇಯರ್, ೧೫ ಪವರ್ ಮರ ಕತ್ತರಿಸುವ ಯಂತ್ರ, ೧೧ ಬ್ಲೋಯರ್ಸ್‌ಗಳು ಹಾಗೂ ೩ ಅಗ್ನಿಶಾಮಕ ದಳದ ವಾಹನ ಮತ್ತು ಕ್ಯೂಆರ್‌ಟಿ ವಾಹನಗಳು ಸನ್ನದ್ಧವಾಗಿವೆ. ಹುಣಸೂರು, ಡಿ.ಬಿ.ಕುಪ್ಪೆ ವಲಯಕ್ಕೆ ೨, ನಾಗರಹೊಳೆ, ವೀರನಹೊಸಹಳ್ಳಿ, ಆನೆಚೌಕೂರು, ಕಲ್ಲಹಳ್ಳ, ಮೇಟಿಕುಪ್ಪೆ, ಅಂತರಸಂತೆ ವಲಯಗಳಿಗೆ ತಲಾ ಒಂದರಂತೆ ೧೧ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನು ಬೆಂಕಿ ನಿಯಂತ್ರಣಕ್ಕೆ ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಇಲಾಖೆಯಿಂದ ಹೆಚ್ಚುವರಿಯಾಗಿ 400 ಸಿಬ್ಬಂದಿ ನೇಮಿಸಿಕೊಂಡು, 8 ವಲಯಗಳಿಗೆ ನಿಯೋಜಿಸಲಾಗಿದೆ.

ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪ್ರತಿ ದಿನಕ್ಕೆ 674 ರೂ ವೇತನ ಹಾಗೂ ರಕ್ಷಣೆ ಒದಗಿಸಲಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago