ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮುತ್ತಪ್ಪ ರೈ ನಿವಾಸದ ಕಾಂಪೌಂಡ್ ಬಳಿ ತಡರಾತ್ರಿ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದ್ದು, ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:- ಮೈಸೂರು | ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಕಾರಿನಲ್ಲಿ ಡ್ರೈವರ್ ಹಾಗೂ ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.
ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



