ಮೈಸೂರು

ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್:‌ ಕೂದಲೆಳೆ ಅಂತರದಲ್ಲಿ ಪಾರು

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್‌ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್‌ ನಡೆಸಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮುತ್ತಪ್ಪ ರೈ ನಿವಾಸದ ಕಾಂಪೌಂಡ್‌ ಬಳಿ ತಡರಾತ್ರಿ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಲಾಗಿದ್ದು, ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ:- ಮೈಸೂರು | ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಕಾರಿನಲ್ಲಿ ಡ್ರೈವರ್‌ ಹಾಗೂ ಗನ್‌ಮ್ಯಾನ್‌ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಗಾಯಗೊಂಡಿರುವ ರಿಕ್ಕಿ ರೈ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

9 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

9 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

10 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

10 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

10 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

11 hours ago