ಮೈಸೂರು: ಕೇರಳದ ವಯನಾಡಿನಲ್ಲಿ ತಡ ರಾತ್ರಿಯಿಂದ ಭಾರೀ ಮಳೆ ಉಂಟಾಗಿದ್ದು, ಮೈಸೂರಿನ ಕೆಲವು ಭಾಗಗಳಿಗೆ ಪ್ರವಾಹದ ಭೀತಿ ಎದುರಾಗಿದೆ.
ವಯನಾಡಿನಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆ ಆಗುತ್ತಿದ್ದು, ಕಬಿನಿ ನದಿಗೆ ಒಳಹರಿವು ಹೆಚ್ಚಾಗಿದೆ. ವಯನಾಡಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಇತ್ತ ಕಬಿನಿ ಈಗಾಗಲೇ ಪೂರ್ಣಗೊಂಡಿದ್ದು, ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಬಿನಿಯಿಂದ ಹೆಚ್ಚು ನೀರು ಹೊರ ಬಿಡಲಾಗುತ್ತಿದ್ದು, ನದಿ ತಟದ ಗ್ರಾಮಗಳಿಗೆ ಮುಳುಗುವ ಭೀತಿ ಹೆಚ್ಚಾಗಿದೆ.
ಕಬಿನಿಯಿಂದ ಈಗಾಗಲೇ 20 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದ್ದು, ಹೆಚ್ಚುವರಿಯಾಗಿ 20 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗುವುದು ಎಂದು ಹೇಳಲಾಗಿದೆ.
ನಂಜನಗೂಡಿನ ಕಪಿಲಾ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದ್ದು, ನಂಜನಗೂಡು, ಮಾದಾಪುರ, ಬಿದರಹಳ್ಳಿ, ನಡಿಗುಂಡ, ಗೊದ್ದನಪುರ, ಹೆಜ್ಜಿಗೆ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…