ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ತುಂಬಿ ಹರಿಯುತ್ತಿದೆ.
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಸ್ನಾನಘಟ್ಟ ಮುಳುಗಡೆಯ ಹಂತ ತಲುಪಿದ್ದು, ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಕಪಿಲಾ ನದಿಯ ಪ್ರವಾಹದ ನೀರಿಗೆ ಹದಿನಾರು ಕಾಲು ಮಂಟಪ ಶೇಕಡ ತೊಂಬತ್ತರಷ್ಟು ಮುಳುಗಡೆಯಾಗಿದ್ದು, ತುಂಬಿ ಹರಿಯುತ್ತಿರುವ ನದಿಯಲ್ಲಿ ಭಕ್ತರು ಹುಚ್ಚಾಟ ಮೆರೆದಿದ್ದಾರೆ.
ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೂ ಭಕ್ತರು ಸ್ನಾನ ಮಾಡಲು ಮುಂದಾಗಿದ್ದು, ಆತಂಕಕ್ಕೆ ಕಾರಣವಾಗಿದೆ.





