ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ.
ಜಿಲ್ಲಾದ್ಯಂತ ನದಿ ಸಮೀಪದ 10 ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಕೇರಳ ವಯನಾಡು ಭಾಗಗಳಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಸದ್ಯ 50ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಿ.ನರಸೀಪುರದಲ್ಲಿ 3 ಕಡೆ, ನಂಜನಗೂಡು ತಾಲೂಕಿನಲ್ಲಿ 6 ಕಡೆ, ಎಚ್‌ಡಿ ಕೋಟೆ ತಾಲೂಕಿನ 1 ಪ್ರದೇಶ ಸೇರಿ ಜಿಲ್ಲೆಯಾದ್ಯಂತ 10 ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.