ಮೈಸೂರು

ಪ್ರವಾಹ ಭೀತಿ: 10 ಪ್ರದೇಶಗಳ ಜನ ಸ್ಥಳಾಂತರ

ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್‌ಎಸ್‌ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ ಕ್ಯೂಸೆಕ್ಸ್‌ ನೀರನ್ನು ಹೊರಕ್ಕೆ ಹರಿಸಲಾಗಿದೆ. ಈ ಹಿನ್ನೆಲೆ ನದಿಪಾತ್ರಗಳಲ್ಲಿ ಪ್ರವಾಹ ಉಂಟಾಗಿದೆ.

ಜಿಲ್ಲಾದ್ಯಂತ ನದಿ ಸಮೀಪದ 10 ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಕೇರಳ ವಯನಾಡು ಭಾಗಗಳಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಸದ್ಯ 50ಸಾವಿರ ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ತಿ.ನರಸೀಪುರದಲ್ಲಿ 3 ಕಡೆ, ನಂಜನಗೂಡು ತಾಲೂಕಿನಲ್ಲಿ 6 ಕಡೆ, ಎಚ್‌ಡಿ ಕೋಟೆ ತಾಲೂಕಿನ 1 ಪ್ರದೇಶ ಸೇರಿ ಜಿಲ್ಲೆಯಾದ್ಯಂತ 10 ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿರುವ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

6 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

7 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

7 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

8 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

8 hours ago