ಮೈಸೂರು: ಕೆಆರ್‌ಎಸ್‌ನಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಯಾವ ಕ್ಷಣದಲ್ಲಾದರೂ ಕೆಆರ್‌ಎಸ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಲಿದೆ. ಹೀಗಾಗಿ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾರವನ್ನು ಶುಕ್ರವಾರದಿಂದ(ಜು.19) ಸ್ಥಗಿತಗೊಳಿಸಲಾಗಿದೆ.
ಕೆಆರ್‌ಎಸ್ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಯಾದರೆ, ದೋಣಿ ವಿಹಾರವು ಅಪಾಯಕಾರಿಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.





