ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ತಾಲ್ಲೂಕು ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು, ರಾಜ್ಯಾದಂತ ಪ್ಲಾಸ್ಟಿಕ್‌ಗಳನ್ನು ನಿಷೇಧ ಮಾಡಲಾಗಿದೆ. ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು ಪಾರ್ಸೆಲ್ ಕಟ್ಟಿ ಕೊಡಲು ಪ್ಲಾಸ್ಟಿಕ್‌ಗಳನ್ನು ಬಳಸುವಂತಿಲ್ಲ. ಎಲ್ಲಾ ಹೋಟೆಲ್, ಕ್ಯಾಂಟೀನ್ ಮತ್ತು ಬೀದಿಬರಿ ವ್ಯಾಪಾರಿಗಳು ಸಾರ್ವಜನಿಕರಿಗೆ ಶುದ್ಧವಾದ ಆಹಾರವನ್ನು ನೀಡಬೇಕು. ಆಹಾರವನ್ನು ತಯಾರಿಸಿದ ನಂತರ ಮುಚ್ಚಿಡಬೇಕು ಹಾಗೂ ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಈಗ ಬೇಸಿಗೆ ಕಾಲವಾದ್ದರಿಂದ ಜನರಿಗೆ ಕುಡಿಯಲು ಕಡ್ಡಾಯವಾಗಿ ಬಿಸಿನೀರನ್ನು ನೀಡಬೇಕು ಎಂದು ಸೂಚನೆ ನೀಡಿದರು.
ಬಳಿಕ ಭೇಟಿ ನೀಡಿದ್ದ ಎಲ್ಲಾ ಹೋಟೆಲ್‌ಗಳಿಂದ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಜಿಲ್ಲಾ ಮಟ್ಟದ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಒಳಪಡಿಸಲಾಯಿತು. ಇದೇ ಸಂದರ್ಭದಲ್ಲಿ ಹೋಟೆಲ್ ಮತ್ತು ಕ್ಯಾಂಟೀನ್, ಬೀದಿ ಬರಿ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ವಿಧಿಸಲಾಯಿತು. ಈ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…