Mysore
22
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಅನ್ನದಾತರ ಪ್ರತಿಭಟನೆ

ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು.

ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ರಸ್ತೆ ತಡೆಗೆ ಮುಂದಾದಾಗ ರೈತರು ಹಾಗೂ ಸ್ಥಳೀಯ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ಇದನ್ನು ಓದಿ: ದೊಮ್ಮನಗದ್ದೆ ಗ್ರಾ.ಪಂ ಮುಂದೆ ಪ್ರತಿಭಟನೆಗಿಳಿದ ಗ್ರಾಮಸ್ಥರು: ಕಾರಣ ಇಷ್ಟೇ

ಈ ವೇಳೆ ಕೆರಳಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಅವರು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ರಾಜಕಾರಣಿಗಳು ಬರುವಾಗ ಹೆದ್ದಾರಿಗಳನ್ನು ಬಂದ್‌ ಮಾಡುತ್ತೀರಿ. ನಾವು ಹಕ್ಕು ಕೇಳಲು ಬಂದ್‌ ಮಾಡಿದರೆ ಕೇಳುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಪ್ರತಿ ಕ್ವಿಂಟಾಲ್‌ ಭತ್ತಕ್ಕೆ 500 ರೂ ಹೆಚ್ಚುವರಿ ದರ ನಿಗದಿ ಮಾಡಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಬೇಕು. ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಿಗದಿ ಮಾಡಿದಂತೆ, ದಕ್ಷಿಣ ಕರ್ನಾಟಕದ ಕಾರ್ಖಾನೆಗಳಿಗೂ ಕಬ್ಬು ಕಟಾವು ಸಾಗಾಣಿಕೆಯನ್ನು ಬಿಟ್ಟು ಹಣ ಪಾವತಿಗೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

Tags:
error: Content is protected !!