ಮೈಸೂರು : ಪ್ರಧಾನಿ ಮೋದಿ ಅವರ 73ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕವಾಗಿ ಪೌರಕಾರ್ಮಿಕರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಮೈಸೂರು ಸಂಸದ ಪ್ರತಾಪ್ ಸಿಂಹ ಪೌರಕಾರ್ಮಿಕರ ಪಾದಪೂಜೆ ಮಾಡಿದರು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಪಾದಪೂಜೆ ಕಾರ್ಯಕ್ರಮ ನಡೆಯಿತು. ಸಂಸದರಿಗೆ ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್ ಸಾಥ್ ನೀಡಿದರು.
ಪೌರಕಾರ್ಮಿಕರಿಗೆ ಪಾದಪೂಜೆ ಮಾಡುವ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಒಂದು ವಾರಗಳ ಕಾಲ ವಿವಿಧ ಸೇವಾ ಕಾರ್ಯ ಮಾಡಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ.