ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಗೆ ಸಲ್ಲಿಸಿದ ಒಂದು ದಿನದ ಬಳಿಕ ಯದುವೀರ್ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತು ಮೈಸೂರು ಅಭಿವೃದ್ಧಿಗಾಗಿ ಇದೇ ರೀತಿ ಬೆಂಬಲಿಸಿ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ.
ಏ.೩ ರಂದು ತಮ್ಮ ಅಪಾರ ಅಭಿಮಾನಿಗಳ ಬೆಂಬಲದೊಂದಿಗೆ ನಗರದ ಅರಮನೆ ಆವರಣದ ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ರ್ಯಾಲಿಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಯದುವೀರ್ ಅವರಿಗೆ ಜೊತೆಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಿ.ಎನ್ ಅಶ್ವಥ್ ನಾರಾಯಣ್ ಜೊತೆಯಾಗಿದ್ದರು.
ಈ ಸಂಬಂಧ ಇಂದು (ಏ.೪) ನಾಮಪತ್ರ ಸಲ್ಲಿಕೆಗೆ ಬೆಂಬಲ ಸೂಚಿಸಲು ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಬಿಜೆಪಿ ಹಾಗೂ ಜೆಡಿಎಸ್ ಮಖಂಡರಿಗೆ ಮತ್ತು ಮತಭಾಂದವರಿಗೆ ಕೃತಜ್ಞತೆಯನ್ನು ಸಮರ್ಪಿಸಿದ್ದಾರೆ.
ಚುನಾವಣೆಯಲ್ಲಿ ಇದೇ ರೀತಿ ಉತ್ಸಾಹವನ್ನು ತೋರಿದ್ದೇ ಆದಲ್ಲಿ ನಮ್ಮೆಲ್ಲಾ ಕೆಲಸಗಳು ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಭಾಗವಹಿಸುವಿಕೆ ನಮಗೆ ಶಕ್ತಿ ತುಂಬಿದೆ. ಇದೇ ರೀತಿ ಈ ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲ ನೀಡಿ ನನ್ನನ್ನು ಹಾರೈಸಿ ಎಂದು ಯದುವೀರ್ ವೀಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…