ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ.
ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿರುವ ದಸರಾ ಮಹೋತ್ಸವವು ಸಾಮಾನ್ಯವಾಗಿ ಪ್ರತಿ ವರ್ಷ 10 ದಿನಗಳ ಕಾಲ ನಡೆಯುತ್ತದೆ. ದಸರಾ ಪ್ರಾರಂಭವಾಗಿದ್ದಾಗಿನಿಂದಲೂ ಅಂದರೆ 400 ವರ್ಷಗಳಿಂದಲೂ 10 ದಿನಗಳ ಕಾಲ ನಡೆಯುತ್ತಲೇ ಬಂದಿದೆ. ಆದರೆ, ಈ ಬಾರಿ ದಸರಾ 10 ಅಲ್ಲ, 11 ದಿನ.
ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ಆಚರಣೆ ಮಾಡಲಾಗುತ್ತದೆ. ಸೆಪ್ಟಂಬರ್ 26, ಸೆ.27 ಎರಡೂ ದಿನ ಪಂಚಮಿ ಆಗಮನವಿದ್ದು, ಹೀಗಾಗಿ ಈ ಬಾರಿ 11 ದಿನ ದಸರಾ ಆಚರಣೆ ಇರಲಿದೆ. ಇದು ಇತಿಹಾಸದಲ್ಲೇ ಕಂಡು- ಕೇಳರಿಯದ ರೀತಿಯ ದಸರಾ ಮಹೋತ್ಸವ ಆಗಿದ್ದು, ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಈ ರೀತಿ 11 ದಿನಗಳ ಕಾಲ ದಸರಾ ಆಚರಣೆ ಮಾಡುತ್ತಿರುವುದು ಇದೇ ಪ್ರಥಮ ಬಾರಿ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ದಿನಗಳು ವಿದ್ವಾಂಸರಲ್ಲಿಯೇ ಗೊಂದಲ ಹುಟ್ಟುಹಾಕಿದೆ. 1399 ರ ವಿಜಯನಗರ ಸಾಮ್ರಾಜ್ಯದ ಆಳ್ವಿಕೆ, 1410ರ ಮೈಸೂರು ಸಂಸ್ಥಾನದ ಆಳ್ವಿಕೆ ಕಾಲದಿಂದ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದ್ದು, ಈವರೆಗೆ 11 ದಿನಗಳ ಕಾಲ ದಸರಾ ಮಹೋತ್ಸವ ಆಚರಿಸಿದ ಉದಾಹರಣೆಗಳಿಲ್ಲ. ನವರಾತ್ರಿಯ ಮರುದಿನ ವಿಜಯದಶಮಿ ಆಚರಿಸುವುದು ಸಂಪ್ರದಾಯ. ವಿಜಯದಶಮಿಯಂದು ಅರಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆದರೆ, ರಾಜ್ಯ ಸರ್ಕಾರದ ವತಿಯಿಂದ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.
ರಾಜ್ಯಸರ್ಕಾರ ದಶಮಿ ಪ್ರಕಾರ ಹತ್ತು ದಿನಗಳ ಕಾಲ ಆಚರಿಸಿ ವಿಜಯದಶಮಿ ಮೆರವಣಿಗೆ ನಡೆಸಲಾಗದು. ಏಕೆಂದರೆ ಪಂಚಾಂಗದಲ್ಲಿ ಯಾವ್ಯಾವ ವರ್ಷಗಳಲ್ಲಿ ಏನೇನು ನಡೆಯಬೇಕು ಎಂಬುದು ಈಗಾಗಲೇ ಅಡಕವಾಗಿರುವ ಕಾರಣ ಅದೇ ರೀತಿ ನಡೆಯಬೇಕಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವಷ್ಟೇ ಅಂತಿಮ ನಿರ್ಧಾರವಾಗಲಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದರು.
ನವರಾತ್ರಿ ಮುಗಿದು ಹತ್ತನೇ ದಿನ ವಿಜಯದಶಮಿ ಬರಲಿದೆ. ದಸರಾ ಮಹೋತ್ಸವ ಹನ್ನೊಂದು ದಿನ ಬಂದರೂ ಅದರ ಲೆಕ್ಕ ಹತ್ತು ದಿನಗಳೇ ಆಗಿರುತ್ತದೆ. ಪಂಚಾಂಗದಲ್ಲಿ ಯಾವ ರೀತಿ ಆಚರಣೆ ಮಾಡಬೇಕು ಎಂಬುದನ್ನು ನೋಡಿ ಹೇಳಬೇಕಿದೆ ಎಂದು ಪುರೋಹಿತರಾದ ಜನಾರ್ಧನ್ ಹೇಳಿದರು.
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…
ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…