ಮೈಸೂರು : ಅರಣ್ಯ ಇಲಾಖೆ ಹಂಗಾಮಿ ಜೀಪ್ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿ ಗ್ರಾಮದ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೇಲಾಧಿಕಾರಿಗಳ ಕಿರುಕುಳದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ವಿನೋದ್ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ನ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ಕ್ರಿಮಿನಾಶಕ ಸೇವಿಸಿದ್ದಾನೆ. ಈ ವೇಳೆ, ಪ್ರಜ್ಞಾಹೀನನಾಗಿದ್ದ ವಿನೋದ್‌ನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಲ್ಲಿನ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಡಿಆರ್ಎಫ್ಒ ನವೀನ್, ಜೀಪ್ ಟೈರ್ ಪಂಚರ್ ಆಗಿದ್ದ ಹಿನ್ನೆಲೆ ನಾನು ವಿನೋದ್ಗೆ, ನಮಗೆ ಗೊತ್ತಿಲ್ಲ, ನೀವೇ ಪಂಚರ್ ಹಾಕಿಸಬೇಕು ಎಂದು ಸುಮ್ಮನೆ ಗದರಿಸಿದೆ. ಅಷ್ಟಕ್ಕೆ ವಿನೋದ್ ನನ್ನ ವಿರುದ್ಧ ದೂರು ನೀಡಲು ಕಚೇರಿಗೆ ತೆರಳಿದ್ದರು. ಕಚೇರಿಯಲ್ಲಿ ಏನಾಗಿದೆ ಗೊತ್ತಿಲ್ಲ. ಬಳಿಕ ಇಲ್ಲಿನ ವಸತಿಗೃಹಕ್ಕೆ ಬಂದಿದ್ದಾರೆ. ಈ ವೇಳೆ, ನಾನು ಕಾಫಿ ಕುಡಿಯಲು ಹೋಗಿದ್ದೆ. ನಾನು ಬರುವಷ್ಟರಲ್ಲಿ ವಿಷ ಸೇವಿಸಿದ್ದಾನೆ ಎಂದು ಹೇಳಿದರು. ನಾನು ಅವರ ಮೇಲೆ ಹಲ್ಲೆ ಮಾಡಿಲ್ಲ. ನಮಗೆ ಹಲ್ಲೆ ಮಾಡುವ ಯಾವುದೇ ಹಕ್ಕಿಲ್ಲ. ಬುಧವಾರ ಸಂಜೆ 5.45 ಸುಮಾರಿಗೆ ವಿಷ ಸೇವಿಸಿದ್ದಾರೆ. ಈ ಬಗ್ಗೆ ತಿಳಿದ ತಕ್ಷಣ ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದೆವು ಎಂದು ಹೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…