ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ.
ಅರಣ್ಯ ಇಲಾಖೆ ಯುವಕರ ಸಹಕಾರದಿದ ಬೆಂಕಿ ನಂದಿಸಿದೆ. ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಸೊಳ್ಳೆಪುರ ಅರಣ್ಯ ಪ್ರದೇಶದ ಟಿಬೆಟ್ ಕ್ಯಾಂಪ್ ಬಳಿಯ ಅರಣ್ಯದಲ್ಲಿ ಈ ಘಟನೆ ನಡೆದಿದೆ. ಸುಮಾರು 4 ವರ್ಷಗಳ ಹಿಂದೆ ಅರಣ್ಯ ಇಲಾಖೆ ವತಿಯಿಂದ ನೆಟ್ಟಿದ್ದ ಹಣ್ಣಿನ ಗಿಡ, ಬಿದಿರು ಸಸಿಗಳು ಸಹ ಹಾಗೂ ಹುಲ್ಲುಗಾವಲು ಬೆಂಕಿಗಾಹುತಿಯಾಗಿದೆ.





