ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್ ಬಸವರಾಜು ಹೇಳಿದರು.
ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು ಆವರಿಸಿದ್ದು, ದೇವಿಕೆರೆ, ಗೊಲ್ಲಹಳ್ಳಿ ಭಾಗದಲ್ಲಿ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದರು.
ಉದ್ದೇಶ ಪೂರ್ವಕವಾಗಿ ಬೆಂಕಿ ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ ಗಾಳಿ ವೇಗ ಹಾಗೂ ಬಿಸಿಲಿನ ವಾತಾವರಣ ಇದ್ದುದರಿಂದ ಬೆಂಕಿ ಹೆಚ್ಚಿತ್ತು ನಾವು ಎಷ್ಟೇ ಪ್ರಯತ್ನ ಪಟ್ಟರೂ ಆ ಜಾಗಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಶ್ರಮ ಹಾಕಿದ್ದಾರೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.
ಇಂದು ಬೆಳಿಗ್ಗೆ ಕೂಡ ಎರಡು ತಂಡ ಮಾಡಿ ಕೆಂಡ ಇದ್ರೆ ಅದನ್ನು ಆರಿಸಲು ಹೇಳಿದ್ವಿ. ಸದ್ಯಕ್ಕೆ ಡ್ರೋನ್ ಹಾರಿಸಿ ಎಲ್ಲವನ್ನೂ ಪರಿಶೀಲನೆ ಮಾಡಿದ್ದೇವೆ ಎಂದು ಹೇಳಿದರು.
ಸಣ್ಣ ಕಿಡಿ ಇಡೀ ಕಾಡನ್ನೇ ನಾಶ ಮಾಡತ್ತದೆ ಹೀಗಾಗಿ ಸಾರ್ವಜನಿಕರು ಕಾಡಿನಲ್ಲಿ ಬಿಡಿ ಸಿಗರೇಟ್ ಸೇದಿ ಎಸೆಯಬೇಡಿ ಎಂದು ಮನವಿ ಅವರು ಮಾಡಿದರು.
ಅದೃಷ್ಟವಶಾತ್ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ. ಬೆಳಿಗ್ಗೆ ನಮ್ಮ ವಾಚರ್ ಕಣ್ಣಿಗೆ ಚಿರತೆ ಹಾಗೂ ಮರಿಗಳು ಬಿದ್ದಿದೆ. ಬೆಂಕಿ ಬಿದ್ದ ತಕ್ಷಣ ಪ್ರಾಣಿಗಳು ಒಂದು ಕಡೆಯಿಂದ ಮತ್ತೊಂದು ಭಾಗಕ್ಕೆ ಹೋಗಿವೆ ಎಂದರು.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…