ಮೈಸೂರು: ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.
ಎಸಿಎಫ್ ಅಮೃತ ಮಾಯಪ್ಪನವರ್ ಎಂಬುವವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಸುರೇಶ್ ಅವರ ಶವ ಅರಣ್ಯ ಸಿಬ್ಬಂದಿಗೆ ನೀಡಿದ ಕ್ವಾರ್ಟರ್ಸ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇದನ್ನೂ ಓದಿ:- ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸುರೇಶ್ ಕುಟುಂಬಸ್ಥರು, ಸರಗೂರು ಪೊಲೀಸ್ ಠಾಣೆಯಲ್ಲಿ ಹೊಟ್ಟೆನೋವು ತಾಳಲಾರದೇ ಸಾವಾಗಿದೆ ಎಂದು ಪ್ರಕರಣ ದಾಖಲಿಸಲಾಗಿದೆ.
ಡೆತ್‌ನೋಟ್ ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಪೊಲೀಸರು ಹಿರಿಯ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸುರೇಶ್ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.





