ಮೈಸೂರು

ಅರಣ್ಯ ಹಕ್ಕು ಕಾಯ್ದೆ ಅರ್ಜಿ ; ಶೀಘ್ರ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು :  ಜಿಲ್ಲೆಯಲ್ಲಿ ಬಾಕಿಯಿರುವ ಅರಣ್ಯ ಹಕ್ಕು ಕಾಯ್ದೆಯ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲು ಕಂದಾಯ ಇಲಾಖೆ, ಸರ್ವೇ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಎಂದು  ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ  ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ  ಪಿಎಂ ಜನ್ಮನ್ ಹಾಗೂ ಅರಣ್ಯ ಹಕ್ಕು ಕಾಯ್ದೆಯ ಕುರಿತು ಜಿಲ್ಲಾ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು

ಪಿಎಂ ಜನ್ಮನ್ ಯೋಜನೆಯ ಬಗ್ಗೆ ಸಂಬಂಧಿಸಿದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಪಿಎಂ ಜನ್ಮನ್ ಯೋಜನೆಯ ಅಡಿಯಲ್ಲಿ ಇಂಧನ ಇಲಾಖೆ ವತಿಯಿಂದ 18 ಹಾಡಿಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮೊಬೈಲ್ ಮೆಡಿಕಲ್ ಯೂನಿಟ್ ಶೀಘ್ರವಾಗಿ ಕಾರ್ಯನಿರ್ವಹಿಸುವಂತೆ ಹೇಳಿದರು. ಶಿಕ್ಷಣ ಇಲಾಖೆಯ ಮಂಜುರಾಗಿರುವ ವಸತಿ ನಿಲಯದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ ಕಾರ್ಯರಂಭ ಮಾಡಲು ಸೂಚಿಸಿ, ಕುಡಿಯುವ ನೀರು ಹಾಗೂ ರಸ್ತೆ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.

5 ಎಂ ಪಿ ಸಿ ಸೆಂಟರ್ ಗಳು ಮಂಜೂರಾಗಿದ್ದು, ಉಳಿಕೆ 23 ಎಂ ಪಿ ಸಿ ಗಳಿಗೆ ಅಂದಾಜು ಪಟ್ಟಿ ತಯಾರಾಗುತ್ತಿದ್ದು, ಶೀಘ್ರವೇ ಅನುಮೋದನೆಗೆ ಮೇಲಧಿಕಾರಿಗಳಿಗೆ ಕಳಿಸಬೇಕೆಂದು ವಿಡಿವಿಕೆ ಕೇಂದ್ರ ಗಳನ್ನು ನಿಗಧಿತ ಅವಧಿಯೊಳಗೆ ಪ್ರಾರಂಭಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ನಾಗರಹೊಳೆ ಹುಲಿ ಸಂರಕ್ಷಿತ ವನ್ಯಜೀವಿ ವಲಯದ ನಿರ್ದೇಶಕಿ ಸೀಮಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ ಎಂ ಕೆ ಮಲ್ಲೇಶ್, ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಗೂ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago