ಮೈಸೂರು

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ್ ಕರೆ ನೀಡಿದರು.

ತಾಲ್ಲೂಕಿನ ಬದನವಾಳು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭಾನುವಾರ ಭೇಟಿ ನೀಡಿ, ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಪ್ರೀತಿ, ದ್ವೇಷದ ಲಾಭ-ನಷ್ಟಗಳೆರಡನ್ನೂ ಕಂಡವರು ನೀವು. ಕೂಡಿ ಕೆಲಸ ಮಾಡಿ ಗ್ರಾಮದಲ್ಲಿ ಒಗ್ಗಟ್ಟು ಸಾಽಸಬೇಕು. ಬದನವಾಳನ್ನು ಮಾದರಿ ಗ್ರಾಮವಾಗಿಸಲು ನಾನೂ ನಿಮ್ಮ ಜೊತೆ ಕೈಜೋಡಿಸುತ್ತೇನೆ ಎಂದರು.

ಕೇಂದ್ರ ಸರ್ಕಾರ ಮ-ನರೇಗಾ ಯೋಜನೆಯನ್ನು ಮಾರ್ಪಾಡು ಮಾಡಿ ತಪ್ಪು ಮಾಡಿದೆ ಎಂದರು. ವರುಣ ಕ್ಷೇತ್ರದ ಪ್ರತಿ ಪಂಚಾಯಿತಿಗೂ ಆಶ್ರಯ ಮನೆ ನೀಡಲಾಗಿದೆ. ಆದರೆ ಬದನವಾಳಿಗೆ ಒಂದು ಮನೆಯನ್ನೂ ನೀಡಿಲ್ಲ ಎಂದು ಸಂವಾದದಲ್ಲಿ ಸದಸ್ಯರು ಆರೋಪಿಸಿದರು.

ಇದಕ್ಕೆ ಉತ್ತರ ನೀಡಲಾಗದ ಪಾಟೀಲರು, ಪ್ರತಿ ವಾರ್ಡ್‌ನಲ್ಲೂ ಗಾಂಧಿ ಗ್ರಾಮ ಸ್ವರಾಜ್ಯ ಬಳಗ ಕಟ್ಟಿ, ಕಡ್ಡಾಯವಾಗಿ ಗ್ರಾಮಸಭೆ ನಡೆಸಿ ಅಭಿವೃದ್ಧಿಗಾಗಿ ನೀವೇ ಯೋಜನೆ ರೂಪಿಸಿ, ಅದನ್ನು ಕಾರ್ಯಗತಗೊಳಿಸಿ ಎಂದು ಸದಸ್ಯರಿಗೆ ಕಿವಿಮಾತು ಹೇಳಿದರು.

ಇದೇ ತಿಂಗಳ ಒಳಗಾಗಿ ಬಳಗ ರಚಿಸಿಕೊಳ್ಳಿ. ಚುನಾವಣೆಯ ಹಿಂದಿನ ಹಾಗೂ ಮುಂದಿನ ೧೫ ದಿನಗಳು ಮಾತ್ರ ಪಕ್ಷ ರಾಜಕಾರಣ. ನಂತರ ಏನಿದ್ದರೂ ಅಭಿವೃದ್ಧಿ ಹಾಗೂ ಒಗ್ಗಟ್ಟು ಇರಬೇಕು ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಭಾರತ್ ಜೋಡೋ ಯಾತ್ರೆಯನ್ನು ಬದನವಾಳಿಗೆ ಕರೆತರುವ ಮೂಲಕ ರಾಷ್ಟ್ರೀಯ ಭೂಪಟದಲ್ಲಿ ಬದನವಾಳನ್ನು ಮತ್ತೆ ಮೂಡಿಸಿದವರು ಮಾಜಿ ಸಂಸದ ದಿ.ಧ್ರುವನಾರಾಯಣ ಅವರು ಎಂದರು.

ಗುಡಿ ಕೈಗಾರಿಕೆಗೆ ಹೆಸರಾಗಿದ್ದ ಈ ಗ್ರಾಮದಲ್ಲಿ ಈಗ ಹೊಳೆ ನರಸೀಪುರದಿಂದ ಬಂದರೆ ಹತ್ತಿ ನೂಲು ಎಂಬ ಪರಿಸ್ಥಿತಿ ಇದ್ದು, ಇದು ಬದಲಾಗಬೇಕು ಎಂದರು. ಐದನೇ ಹಣಕಾಸು ಯೋಜನಾ ಸಮಿತಿಯ ಅಧ್ಯಕ್ಷ ನಾರಾಯಾಣ ಸ್ವಾಮಿ ಮಾತನಾಡಿ, ಗಾಂಧಿ ಅಂದು ಕಂಡ ಕನಸನ್ನು ನಾವು ನನಸು ಮಾಡಲು ಕಾರ್ಯೋನ್ಮುಖರಾಗೋಣ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ೪೦ ಕೋಟಿ ರೂ.ಗಳನ್ನು ಕ್ರಿಯಾಶೀಲ ಸಂಸದರಾಗಿದ್ದ ಧ್ರುವನಾರಾಯಣ ಅವರ ಮಗ ದರ್ಶನ್ ಅವರ ಕಾಲದಲ್ಲಿ ಸಮರ್ಪಕವಾಗಿ ಸದ್ವಿನಿಯೋಗವಾಗಬೇಕು. ಅಂಥ ಕ್ರಿಯಾಶಿಲತೆ ಅವರಲ್ಲಿದೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

7 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

7 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

7 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

7 hours ago