ಬೆಂಗಳೂರು : ಮುಡಾ ಹಗರಣ ಸಂಬಂಧ ಮಾಜಿ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಿನೇಶ್‌ಕುಮಾರ್ ಅವರನ್ನು ಬಂಧಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಕಾನೂನಿನ ಸಂಕಷ್ಟ ತಂದೊಡ್ಡಿದ್ದ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ತನಿಖೆ ನಡೆಸುತ್ತಿದ್ದ ಇಡಿ ಮಂಗಳವಾರ ವಿಚಾರಣೆಗೆ ಸಮನ್ಸ್ ನೀಡಿತ್ತು. ಬೆಳಿಗ್ಗೆಯಿಂದ ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದರು.
ಇದಕ್ಕೂ ಮುನ್ನ ಹಗರಣದ ಪ್ರಮಖ ರೂವಾರಿ ಎಂದೇ ಹೇಳಲಾಗಿರುವ ದಿನೇಶ್‌ಕುಮಾರ್ ಮತ್ತು ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ವಿರುದ್ದ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಲೋಕಾಯುಕ್ತ ತನಿಖಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…