ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಮುಂದಿನ ವಾರ ಗುಂಡ್ಲುಪೇಟೆಗೆ ತೆರಳಿ ಸ್ಥಳ ನಿಗದಿ ಪಡಿಸುತ್ತೇವೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದರು.





