ಮೈಸೂರು

AIIMS Delhi: ಜುಲೈ 23ರಿಂದ 26ರ ವರೆಗೆ ಟಿಬೇಟಿಯನ್‌ ಕ್ಯಾಂಪ್‌ನಲ್ಲಿ ಉಚಿತ ಆರೊಗ್ಯ ಶಿಬಿರ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್‌ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್‌ (ಆಲ್‌ ಇಂಡಿಯಾ ಇನ್ಸ್‌ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಪಲ್ಮನರಿ ಮೆಡಿಸಿನ್‌ ಶ್ವಾಸಕೋಶ, ನೆಫ್ರಾಲಜಿಸ್ಟ್‌, ರುಮಟಾಲಜಿ, ಆಂಕೋಲಜಿ, ಸ್ತ್ರೀ ರೋಗ ತಜ್ಞ ಸೇರಿದಂತೆ ಹಲವು ವಿಭಾಗಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈ ಶಿಬಿರಕ್ಕೆ ಸಾರ್ವಜನಿಕರಿಗೂ ಉಚಿತ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡಲಾಗಿದೆ.

ಜುಲೈ.23 ರ ಬೆಳಿಗ್ಗೆ 11 ಗಂಟೆಯಿಂದ ಜು.26ರ ಸಂಜೆ ವರೆಗೆ ಏಮ್ಸ್‌ನ ನುರಿತ ತಜ್ಞರಿಂದ ಮೂರು ದಿನಗಳ ಕಾಲ ಉಚಿತ ಆರೊಗ್ಯ ಶಿಬಿರ ಮಾಡಲಾಗವುದು. ಈ ಶಿಬಿರದಲ್ಲಿ ಭಾಗವಹಿಸಲು ಯಾವುದೇ ದಾಖಲೆಗಳ ಅಗತ್ಯೆತೆಯೂ ಬೇಕಾಗಿಲ್ಲ. ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಖಾಸಗಿ ಮಾಧ್ಯಮ ಟಿವಿ9ಗೆ ಸಾರ್ವಜನಿಕ ಸಂಪರ್ಕಾಧಿಕಾರಿ ಸೋನಮ್‌ ಮಾಹಿತಿ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

53 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

55 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

57 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

60 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago